ಮಂಡ್ಯ: ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಸೌಜನ್ಯ ಹತ್ಯೆ ಪ್ರಕರಣ ಖಂಡಿಸಿ ಮಂಡ್ಯದ ಡಿಸಿ ಕಚೇರಿ ಬಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಿರಂತರವಾಗಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸರ್ಕಾರಗಳು ವಿಫಲವಾಗಿವೆ. ಮಣಿಪುರದ ಪ್ರಕರದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕು. ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎಸ್ ಸಿ ಎಸ್ ಪಿ ಯೋಜನೆಯ 11130 ಕೋಟಿ ವಾಪಸ್ ಪಡೆದಿರುವುದನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು.