Friday, April 18, 2025
Google search engine

Homeರಾಜ್ಯಸುದ್ದಿಜಾಲಬಿಸಿಯೂಟ ಕಾರ್ಮಿಕರಿಂದ ಪ್ರತಿಭಟನೆ

ಬಿಸಿಯೂಟ ಕಾರ್ಮಿಕರಿಂದ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ೨೦೨೨ರ ಡಿಸೆಂಬರ್‌ನಿಂದ ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರು ಹಲವು ಬಾರಿ ಮನವಿ ಮಾಡಿಕೊಂಡು ಪ್ರತಿಭಟನೆ ನಡೆಸಿದರೂ ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಆಶ್ರಯದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಸುಮಾರು ೧,೧೯,೦೦೦ ಮಧ್ಯಾಹ್ನ ಬಿಸಿಯೂಟ ಕಾರ್ಮಿಕರು ೫೫,೮೦,೦೦೦ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾವಾರು ಮುಷ್ಕರವನ್ನು ಆಯೋಜಿಸಿದ್ದು, ಕೊಪ್ಪಳ ಮತ್ತು ಕೋಲಾರದಿಂದ ೪೫೦ ಕ್ಕೂ ಹೆಚ್ಚು ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಜಿಲ್ಲೆಗಳ ಶಾಲೆಗಳಲ್ಲಿ ಮಧ್ಯಾಹ್ನದ ಊಟವನ್ನು ನೀಡಲಾಗಿಲ್ಲ. ಮುಂದಿನ ದಿನಗಳಲ್ಲಿ ಬಾಗಲಕೋಟೆಯ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದು, ಅಂದು ಜಿಲ್ಲೆಯ ಶಾಲೆಗಳಲ್ಲಿ ಊಟ ನೀಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.

ನಮ್ಮ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಕಿರಿಯ ಅಧಿಕಾರಿಗಳನ್ನು ಕಳುಹಿಸುತ್ತದೆ. ಒಮ್ಮೆ ಬಂದು ಚರ್ಚೆ ಮಾಡಿ ಹೋದ ನಂತರ ಏನೂ ಕಾರ್ಯರೂಪಕ್ಕೆ ಬರುವುದಿಲ್ಲ. ೬೦ ವರ್ಷ ತುಂಬಿದ ಹುದ್ದೆಯಿಂದ ವಜಾಗೊಂಡವರಿಗೆ ೧ ಲಕ್ಷ ರೂಪಾಯಿ ಪಿಂಚಣಿ, ಕೆಲಸದ ಸ್ಥಳದಲ್ಲಿ ಮರಣ ಹೊಂದಿದಲ್ಲಿ ೨೫ ಲಕ್ಷ ರೂಪಾಯಿ ಪರಿಹಾರ ಮತ್ತು ಹೊಸ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ವೇತನ ಹೆಚ್ಚಳವನ್ನು ಜನವರಿಯಿಂದ ಜಾರಿಗೊಳಿಸಬೇಕು ಎಂಬುವುದು ಕಾರ್ಮಿಕರ ಬೇಡಿಕೆಗಳಾಗಿವೆ. ಯೋಜನೆ ಸ್ಥಾಪನೆಯಾಗುವವರೆಗೆ ೪೫ ಮತ್ತು ೪೬ ನೇ ಭಾರತೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಸರ್ಕಾರವು ಕಾರ್ಮಿಕರನ್ನು ಗುರುತಿಸಬೇಕು ಮತ್ತು ಶಾಲೆಗಳಲ್ಲಿ ಅಡುಗೆಯವರನ್ನು ಡಿ ಕಾರ್ಮಿಕರಾಗಿ ನೇಮಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದರು.

RELATED ARTICLES
- Advertisment -
Google search engine

Most Popular