ಮಂಡ್ಯ : ಯುವ ಪೀಳಿಗೆಗೆ ಮಾರ್ಗದರ್ಶಕನಾಗಬೇಕಿದ್ದ ಒಬ್ಬ ಜನಪ್ರಿಯ ನಟ, ಕ್ಷುಲ್ಲಕ ಕಾರಣಕ್ಕಾಗಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಅಮಾನುಷವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಇಂದು ರೈತಸಂಘಟನೆಗಳಿಂದ ಮಂಡ್ಯದಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ.
ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ ಆಯೋಜಿಸಲಾಗಿದೆ. ಮಂಡ್ಯ ಸಂಜಯ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ತನಕ ಜಾಥಾ ನಡೆಯಲಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಾಗೂ ದರ್ಶನ್ ಅವರನ್ನು ಶಾಶ್ವತವಾಗಿ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.