ಮಂಡ್ಯ: ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಬೆಂ-ಮೈ ಹೆದ್ದಾರಿ ತಡೆದು ಕನ್ನಡ ಒಕ್ಕೂಟಗಳು ಪ್ರತಿಭಟನೆ ನಡೆಸಿವೆ.
ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ರಾಜ್ಯ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ, ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಕಿವಿ ಕೇಳಲ್ಲ, ಕಣ್ಣು ಕಾಣಲ್ಲ ನಿರಂತರವಾಗಿ ನೀರು ಬಿಡ್ತಿದ್ದಾರೆ. ಸಂಸದರು ಧ್ವನಿ ಎತ್ತದೆ ಮೌನವಹಿಸಿದ್ದಾರೆ. ಮುಂದೆ ನಮ್ಮ ಹೋರಾಟ ದೊಡ್ಡ ಮಟ್ಟದಲ್ಲಿ ಮಾಡ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ತಕ್ಷಣವೇ ತಮಿಳುನಾಡಿಗೆ ಹೋಗ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಿದರು.