ಮದ್ದೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಮದ್ದೂರು ನೀರಾವರಿ ಇಲಾಖೆ ಬಳಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನೀರಾವರಿ ಇಲಾಖೆ ಅಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕೆರೆಕಟ್ಟೆಗಳನ್ನು ತುಂಬಿಸಿ ಬೆಳೆಗಳನ್ನು ರಕ್ಷಣೆ ಮಾಡಬೇಕು. 2012ರಲ್ಲಿ ಕನ್ನಂಬಾಡಿ ಕಟ್ಟೆಯಲ್ಲಿ 70 ಅಡಿ ನೀರು ಇದ್ದಾಗಲೂ ಜಿಲ್ಲೆಯ ಕೆರೆಕಟ್ಟೆಗಳನ್ನು ತುಂಬಿಸಿ ರೈತರ ಪರವಾಗಿ ಕೆಲಸ ಮಾಡಿದ್ದೀರಿ. ಪ್ರಸ್ತುತ 90 ಅಡಿ ನೀರಿದ್ದು ರೈತರ ಹಿತ ದೃಷ್ಟಿ ಕಾಯುವ ಹಿನ್ನೆಲೆ ಕೆರೆಕಟ್ಟೆಗಳನ್ನು ತುಂಬಿಸಿ ರೈತರ ಬೆಳೆಗಳನ್ನ ಉಳಿಸಿ ಎಂದು ಆಗ್ರಹಿಸಿದರು.