ಮಂಡ್ಯ: ಪಿಡಿಓ ಬೇಜವಾಬ್ದಾರಿಯಿಂದ ಗ್ರಾಮಗಳು ಅಭಿವೃದ್ಧಿ ವಂಚಿತವಾಗಿವೆ. ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಭಾರತೀಪುರ ಕ್ರಾಸ್ ಗ್ರಾಪಂ ಸದಸ್ಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪಿಡಿಓ ದಿನೇಶ್ ವಿರುದ್ಧ ಗ್ರಾಪಂ ಸದಸ್ಯರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಪಂಚಾಯಿತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಸಾರ್ವಜನಿಕರನ್ನ ನಿತ್ಯವೂ ಅಲೆದಾಡಿಸಲಾಗ್ತಿದೆ. ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ಕಚೇರಿಗೆ ಬೀಗ ಜಡಿದು ಗ್ರಾಪಂ ಸದಸ್ಯರು, ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ.