ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನದಿಗಳಿದು ನದಿಗಳಿದು ಪ್ರತಿಭಟನೆ ನಡೆಸಿದರು.
ಮ.ರ.ವೇ. ಸಂಸ್ಥಾಪಕ ಅಧ್ಯಕ್ಷ. ಶಂಕರ್ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕೂಡಲೇ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿದ್ದಾರೆ.
ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಉಗ್ರ ಪತ್ರಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.