ಮಂಡ್ಯ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಮನ್ಮುಲ್ ಬಳಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿಯ ಮನ್ ಮುಲ್ ಗೆ ಮುತ್ತಿಗೆ ಹಾಕಿದ ಕನ್ನಡ ಒಕ್ಕೂಟ ಸಂಘಟನೆಗಳು, ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿದ್ದಾರೆ.
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷ ರವಿ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ತಕ್ಷಣವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಿದ್ದರು.