ಶಿವಮೊಗ್ಗ: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ವೇದಿಕೆ ಕಾರ್ಯಕರ್ತರನ್ನು ಬಂಧಿಸಿ ಕರೆದುಕೊಂಡು ಹೋದರು. ಕರ್ನಾಟಕ ಬಂದ್‌ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅಂತಹ ಪ್ರತಿಕ್ರಿಯೆ ವ್ಯಕ್ತವಾದಂತೆ ಕಂಡುಬಂದಿಲ್ಲ. ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಇದೆ. ಜಿಲ್ಲೆಯಲ್ಲಿ ಬಂದ್‌ಗೆ ಇದುವರೆಗೂ ಯಾವುದೇ ಸಂಘಟನೆ ಕರೆ ನೀಡಿಲ್ಲ. ಉಳಿದಂತೆ ೧೧ ಗಂಟೆಯ ನಂತರ ಕರವೇ ಹಾಗೂ ರೈತ ಸಂಘ ಪ್ರತ್ಯೇಕ ಪ್ರತಿಭಟನೆ ನಡೆಸಲಿವೆ.