ಮಂಗಳೂರು (ದಕ್ಷಿಣ ಕನ್ನಡ): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚೆಲನ್ನು ಕಡಿದ ಪ್ರಕರಣವನ್ನು ಖಂಡಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿ ಮಂಗಳೂರು ಇದರ ವತಿಯಿಂದ ಮಂಗಳೂರಿನ ತಾಲೂಕು ಕಚೇರಿ ಎದುರುಗಡೆ ಪ್ರತಿಭಟನೆ ನಡೆಯಿತು.

ಇದೇ ವೇಳೆ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ಪರಮ ಪವಿತ್ರವಾದ ಗೋ ಮಾತೆಗೂ ರಕ್ಷಣೆ ಇಲ್ಲದಂತಹ ಪರಿಸ್ಥಿತಿಯವರೆಗೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಚಿಂತಾಜನಕ ವಿಷಯ ಅಂದರು.