Tuesday, April 22, 2025
Google search engine

Homeಸ್ಥಳೀಯನಾಳೆ ವಿಷ್ಣು ಅಭಿಮಾನಿಗಳಿಂದ ಪ್ರತಿಭಟನೆ

ನಾಳೆ ವಿಷ್ಣು ಅಭಿಮಾನಿಗಳಿಂದ ಪ್ರತಿಭಟನೆ

ಮೈಸೂರು: ಕನ್ನಡದ ಮೇರು ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿ.೧೭ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವಿಷ್ಣು ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಜಿಲ್ಲೆಯಿಂದ ನೂರಾರು ಅಭಿಮಾನಿಗಳು ತೆರಳಲಿದ್ದೇವೆ’ ಎಂದು ವಿಷ್ಣು ಅಭಿಮಾನಿಗಳ ಒಕ್ಕೂಟ ಸಂಘದ ಅಧ್ಯಕ್ಷ ಎಂಡಿ ಪಾರ್ಥಸಾರಥಿ ತಿಳಿಸಿದರು.

ವಿಷ್ಣುವರ್ಧನ ಅವರ ಪುಣ್ಯಭೂಮಿ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೂ ಎದ್ದು ಕಾಣುತ್ತಿದೆ. ನಿಷ್ಕಲ್ಮಷ ಮನಸ್ಸಿನ ಕನ್ನಡದ ಮೇರು ನಟ ವಿಷ್ಣುದಾದಾಗೆ ಅಗೌರವ ತೋರುವುದು ತರವಲ್ಲ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ನಿರ್ಧಾರ ಕೈಗೊಂಡು ಅವರ ಸಮಾಧಿ ಸ್ಥಳ ಅಭಿಮಾನ್ ಸ್ಟುಡಿಯೋದಲ್ಲಿಯೇ ಪುಣ್ಯಭೂಮಿ ಸ್ಥಾಪನೆಗೆ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು. ಭಾನುವಾರ ಬೆಳಿಗ್ಗೆ ೬:೩೦ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನವನದಿಂದ ಬಸ್ಸಿನಿಂದ ನೂರಾರು ಅಭಿಮಾನಿಗಳು ತೆರಳುತ್ತಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular