ಮದ್ದೂರು: ಕೇಂದ್ರ ಸರ್ಕಾರದಿಂದ ರೈತರ ಮೇಲಿನ ದೌರ್ಜನ್ಯ ಖಂಡಿಸಿ ತಾಲ್ಲೂಕು ಕಚೇರಿ ಬಳಿ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿತು.
ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ವಾಪಸು ಪಡೆಯಬೇಕು. ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಾವೇರಿ ನ್ಯಾಯಾಧೀಕರಣ ತೀರ್ಪು ಹಿಂದೆ ಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರೈತರ ಸಾಲವನ್ನು ಕೂಡಲೇ ಮನ್ನ ಮಾಡಬೇಕು. ದು ಪ್ರತಿಭಟನೆನಾ ನಿರತ ರೈತರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು.