ಮಂಡ್ಯ: ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಿಲ್ಲಾ ಪಂಚಾಯತಿವರೆಗೆ ಮೆರವಣಿಗೆ ನಡೆಸುವ ಮೂಲಕ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಚಿಕ್ಕ ಮಂಡ್ಯ ವಸತಿ ರಹಿತರಿಗೆ ಹೆಚ್.ಕೋಡಿಹಳ್ಳಿ ಸರ್ವೆ.ನಂ.67 ರಲ್ಲಿ 2018 ರಲ್ಲಿ ನಿವೇಶನ ಹಂಚಿಕೆಯಾಗಿತ್ತು. ನಿವೇಶನ ಹಂಚಿಕೆಯಾದ ಬಡಾವಣೆಯಲ್ಲಿ ರಸ್ತೆ ಸಂಪರ್ಕ, ವಿದ್ಯುತ್, ಕುಡಿಯುವ ನೀರು ಸೇರಿ ಹಲವು ಸೌಲಭ್ಯಗಳಿಂದ ನಿವಾಸಿಗಳು ವಂಚಿತರಾಗಿದ್ದರು.
ಪ್ರತಿಭಟನೆಯಲ್ಲಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣವೇ ಮೂಲಭೂತ ಸೌಕರ್ಯಗಳ ಒದಗಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕ ಅಂದಾನಿ, ಶಿವು, ಸತ್ಯ, ಬಸವಾರಾಜು ಸೇರಿ ಹಲವರು ಭಾಗಿಯಾಗಿದ್ದರು.