ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರನ್ನು ಬಂಧಿಸಿ ಎಸ್.ಐ.ಟಿ. ಮುಂದೆ ವಿಚಾರಣೆಗೆ ಹಾಜರುಪಡಿಸಲು ಆಗ್ರಹಿಸಿ ನಗರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ಪೆಟ್ರೋಲ್ ಸುರಿದು ಧಹಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್ ನೇತೃತ್ವದಲ್ಲಿ ಕಾರ್ಯಕರ್ತರು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಜ್ವಲ್ ರೇವಣ್ಣ ಹೊರ ದೇಶಕ್ಕೆ ಹೋಡಿಹೋಗಿದ್ದಾನೆ ತಕ್ಷಣವೇ ಬಂಧಿಸಿ. ಈ ರೀತಿಯ ಕೃತ್ಯ ನಡೆಸಿರುವುದು ಹೆಣ್ಣು ಕುಲಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ತಕ್ಷಣವೇ ಆತನನ್ನ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತಿತರರು ಇದ್ದರು.
