ಮಂಗಳೂರು (ದಕ್ಷಿಣ ಕನ್ನಡ): ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ 4% ಧರ್ಮಾಧಾರಿತ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವ ಕರ್ನಾಟಕ ಸರ್ಕಾರವು ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಸಂಜೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆಯು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ನಡೆಯಿತು.
ಇದೇ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸಿದ್ದರು. ಮಳೆಯ ಮಧ್ಯೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.