ಶಿವಮೊಗ್ಗ: ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಶಾಸಕ ಎಸ್,ಎನ್ ಚನ್ನಬಸಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ಮುರುಗೇಶ್ ಎಂಬುವವರು ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ್ದು ಕಚೇರಿಯ ಗಾಜು ಪುಡಿಪುಡಿಯಾಗಿದೆ.
ತಕ್ಷಣ ಮುರುಗೇಶ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವಿದ್ಯುತ್ ದರ ಏರಿಕೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಎಸ್.ಎನ್ ಚನ್ನಬಸಪ್ಪ ಸೇರಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.