Monday, April 21, 2025
Google search engine

Homeಸ್ಥಳೀಯಶಾಲೆಗಳಿಗೆ ಹೋಗಲು ಸಾಧ್ಯವಾಗದ ಕಾರಣ ಹೆಚ್ಚುವರಿ ಬಸ್ ಕಲ್ಪಿಸಿ: ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಬಿ ಪ್ರದೀಪ್‌...

ಶಾಲೆಗಳಿಗೆ ಹೋಗಲು ಸಾಧ್ಯವಾಗದ ಕಾರಣ ಹೆಚ್ಚುವರಿ ಬಸ್ ಕಲ್ಪಿಸಿ: ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಬಿ ಪ್ರದೀಪ್‌ ಒತ್ತಾಯ

ತಿ.ನರಸೀಪುರ: ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆಗಳಿಗೆ ಹೋಗಲು ಸಾಧ್ಯವಾಗದ ಕಾರಣ ಹೆಚ್ಚುವರಿ ಬಸ್ ಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಗ್ರಾಮಾಂತರ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಬಿ ಪ್ರದೀಪ್‌ ಒತ್ತಾಯಿಸಿದ್ದಾರೆ.

ಶಾಲೆ ಆರಂಭವಾಗುವ ವೇಳೆ ಹಾಗೂ ಶಾಲೆ ಬಿಡುವ ವೇಳೆಯಲ್ಲಿ ಹೆಚ್ಚು ಬಸ್‌ಗಳನ್ನು ನಿಯೋಜಿಸಿದರೆ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆಗೆ ಹೋಗಿ ಬರಲು ಅನುಕೂಲವಾಗುತ್ತದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ತಾಲ್ಲೂಕಿನ ಹಿರಿಯೂರು, ಮಾದಾಪುರ, ಹೆಮ್ಮಿಗೆ, ತಲಕಾಡು ಮಾರ್ಗ, ವರುಣ ವಿಧಾನಸಭಾ ಕ್ಷೇತ್ರದ ಎಡದೊರೆ, ಇಟ್ಟುವಳ್ಳಿ, ರಂಗಸಮುದ್ರ, ಕುಪ್ಯಾ, ತುಂಬಲ, ಬಿಳಿಗೆರೆಹುಂಡಿ, ಮನ್ನಹುಂಡಿ, ಡಣಾಯಕನಪುರ, ತಾಯೂರು ಮಾರ್ಗಗಳಿಗೆ ಬಸ್ ವ್ಯವಸ್ಥೆ ಕಡಿಮೆ ಇರುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪನವರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್‌ಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ನೀಡಿರುವ ಉಚಿತ ಸೌಲಭ್ಯವನ್ನು ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಿಕೊಳ್ಳಬೇಕು. ದುರುಪಯೋಗವಾದರೆ ಅದು ಇತರರಿಗೆ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಮಹಿಳೆಯರು ಅನಾವಶ್ಯವಾಗಿ ಪ್ರಯಾಣಿಸಿ ಇತರೆ ಪ್ರಯಾಣಿಕರಿಗೆ ತೊಂದರೆ ಕೊಡುವ ಬದಲು ಅವಶ್ಯವಿದ್ದರೆ ಮಾತ್ರ ಪ್ರಯಾಣಿಸಬೇಕೆಂದು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular