ವರದಿ: ಎಡತೊರೆ ಮಹೇಶ್
ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆಯಲ್ಲಿ ಹೆಚ್ಚು ಹಾಡಿಗಳಿದ್ದು, ಹಾಡಿಯ ಜನರಿಗೆ ಹೆಚ್ಚು ಆರೋಗ್ಯ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಹಾಡ ಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಕುಮಾರ್ ಸ್ವಾಮಿ ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಪ್ರಾಥಮಿಕ ಕೇಂದ್ರವಾರು ಎಲ್ಲಾ ರಾಷ್ಟೀಯ ಕಾರ್ಯ ಕ್ರಮಗಳ ಪ್ರಗತಿಯನ್ನು ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಆರೋಗ್ಯ ಶಿಬಿರದಲ್ಲಿ ಜನರಿಗೆ ಹೆಚ್ಚು ಅನುಕೂಲ ರೀತಿಯಲ್ಲಿ ಹಾಡಿಯ ಜನರಿಗೆ ಚರ್ಮರೋಗ ತಪಾಸಣೆ, ಕಣ್ಣಿನ ತಪಾಸಣೆ ದಂತ ತಪಾಸಣೆ, ಅನೀಮಿಯಾ ತಪಾಸಣೆ, ಬಿ.ಪಿ. ಸಕ್ಕರೆ ಕಾಯಿಲೆ ತಪಾಸಣೆ, ಗರ್ಭಿಣಿಯರ ತಪಾಸಣೆ, ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿ ವರದಿ ನೀಡಬೇಕು. ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದವರು ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳುವ ಮೊದಲು ಕ್ರಿಯಾ ಯೋಜನೆಯನ್ನು ತಾಲೂಕು ಮಟ್ಟಕ್ಕೆ ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳಾದ ಹಾಗೂ ಜಿಲ್ಲಾ ಸರ್ವೇಕ್ಷಣಾ ಧಿಕಾರಿಗಳಾದ ಡಾ.ಮಹದೇವ ಪ್ರಸಾದ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳಾದ ಡಾ. ಬೃಂದಾ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳಾದ ಡಾ.ಸಿರಾಜ್ ಅಹಮದ್.ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾರವಿಕುಮಾರ್. ಟಿ ಮತ್ತು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯದ ವೈದ್ಯಾಧಿಕಾರಿಗಳು ಮತ್ತು ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.