ತುಮಕೂರು: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ ಎಚ್ಚರ. ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತುಮಕೂರು ಜಿಲ್ಲಾ ಪೊಲೀಸರು ಎಚ್ಚರಿಕೆಯ ಸಾರ್ವಜನಿಕ ನೋಟಿಸ್ ಪ್ರಕಟಿಸಿದ್ದಾರೆ.
ತುಮಕೂರು ಪೊಲೀಸ್ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಸೋಶಿಯಲ್ ಮೀಡಿಯಾವನ್ನು ಜನ ಸ್ನೇಹಿಯಾಗಿ ಬಳಕೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.

ಪ್ರಚೋದನಕಾರಿಯಾಗಿ ಪೋಸ್ಟ್ ಹಾಕಿದ್ರೆ ಜೈಲು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.
ಲುಲೂ ಮಾಲ್ ನಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲ್ಮಟ್ಟದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂದು ಸುಳ್ಳು ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.
ಈ ಪ್ರಕರಣದ ಬೆನ್ನಲ್ಲೆ ತುಮಕೂರು ಪೊಲೀಸರಿಂದ ಪ್ರಕಟಣೆ ನೀಡಲಾಗಿದೆ. ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ, ಸಾಮಾಜಿಕ ಸಾಮರಸ್ಯ ಕದಡುವ ಪೋಸ್ಟ್ ಹಾಕಿದ್ರು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.