ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಾಂಬ್ ದಾಳಿ ಮಾಡುವಂತೆ ಪ್ರಚೋದನೆ ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನವಾಜ್ ಎಂದು ಗುರುತಿಸಲಾಗಿದೆ. ಈತನನ್ನು ಬಂಡೆಪಾಳ್ಯ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನವಾಜ್ ತನ್ನ “ಪಬ್ಲಿಕ್ ಸರ್ವೆಂಟ್” ಎಂಬ ಹೆಸರಿನ ಸೋಶಿಯಲ್ ಮೀಡಿಯಾ ಖಾತೆ ಮೂಲಕ, “ಮೋದಿಯ ಮನೆ ಮೇಲೆ ಮೊದಲು ಬಾಂಬ್ ಹಾಕಿ” ಎಂಬ ಪ್ರಚೋದನಕಾರಿ ಹೇಳಿಕೆಯೊಂದಿಗೆ ವಿಡಿಯೋವನ್ನು ವೈರಲ್ ಮಾಡಿದ್ದ. ಈ ವಿಡಿಯೋ ಕೆಲವೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿತ್ತು.
ದೂರುಗಳ ಆಧಾರದಲ್ಲಿ ತಕ್ಷಣ ಕ್ರಮಕ್ಕೆ ಇಳಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈಗ ಈತನ ವಿರುದ್ಧ ಸಂಬಂಧಿಸಿದ ಕಾನೂನು ಕಲಂಗಳು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪ್ರಚೋದನಕಾರಿ ವಿಷಯ ಹರಡುವುದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಭದ್ರತೆಗೆ ಧಕ್ಕೆಯಾಗುವ ಯಾವುದೇ ಪೋಸ್ಟ್‌ಗಳಿಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.