Friday, April 11, 2025
Google search engine

Homeರಾಜ್ಯಪಿಎಸ್​ಐ ಪರಶುರಾಮ ಸಾವು ಪ್ರಕರಣ​: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಪಿಎಸ್​ಐ ಪರಶುರಾಮ ಸಾವು ಪ್ರಕರಣ​: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ‌ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದ ಬೆನ್ನೆಲ್ಲೇ ಇದೀಗ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರದ ಸಿಎಸ್​ರಿಂದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ‌ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪ ಮಾಡಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು. ಸದ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚಿಸಿದೆ.

ಯಾದಗಿರಿ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿದ್ದಾರೆ. ತನಿಖೆ ಜವಾಬ್ದಾರಿಯನ್ನ ತೆಗೆದುಕೊಂಡ ಆರು ದಿನಗಳಲ್ಲಿ ಸಿಐಡಿ ಎಸ್​ಪಿ ಎಂಟ್ರಿ ಕೊಟ್ಟಿದ್ದರು. ಪರಶುರಾಮ ಕುಟುಂಬಸ್ಥರನ್ನ ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.

ಯಾದಗಿರಿ ನಗರ ಠಾಣೆಯಿಂದ ಸೈಬರ್ ಠಾಣೆಗೆ ವರ್ಗಾವಣೆ ಆಗಿದ್ದ ಪಿಎಸ್ಐ ಪರಶುರಾಮ ಸಾವಾಗಿ ಹಲವು ದಿನಗಳು ಕಳೆದಿವೆ. ಸಾವಾಗಿ ಮಾರನೇ ದಿನವೇ ಕೇಸ್​ನ್ನ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಕೇಸ್​ನ್ನ ತನಿಖೆಯ ಜವಾಬ್ದಾರಿ ವಹಿಸಿಕೊಂಡ ಮಾರನೇ ಸಿಐಡಿ ಅಧಿಕಾರಿಗಳು ಯಾದಗಿರಿಗೆ ಎಂಟ್ರಿ ಕೊಟ್ಟಿದ್ದರು. ಆರಂಭದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತಂಡ ಆಗಮಿಸಿದ ಯಾದಗಿರಿ ಡಿವೈಎಸ್ಪಿ ಕಚೇರಿಯಲ್ಲಿ ಸಾಕಷ್ಟು ಮಾಹಿತಿಯನ್ನ ಕಲೆ ಹಾಕಿದ್ದರು.

ಇನ್ನು ಮೃತ ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹಾಗಾಗಿ ಇಡೀ ಕುಟುಂಬ ಸದ್ಯ ಖುಷಿಯಲ್ಲಿದೆ. ಗಂಡು ಮಗುವಿನ ಆಗಮನದೊಂದಿಗೆ ಮತ್ತೆ ಪರಶುರಾಮನೇ ಹುಟ್ಟಿಬಂದಿದ್ದಾನೆಂದು ಇಡೀ ಕುಟುಂಬ ಸಂಭ್ರಮಪಟ್ಟಿದೆ.

RELATED ARTICLES
- Advertisment -
Google search engine

Most Popular