Friday, April 18, 2025
Google search engine

Homeರಾಜ್ಯಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾದರೆ ಕ್ರಮ

ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾದರೆ ಕ್ರಮ

ಕನಕಪುರ: ಬೀದಿಪತಿ ವ್ಯಾಪಾರಿಗಳಿಂದ ವಾಹನ ಸವಾರರು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾದರೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಗರ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ ಬೀದಿಬದಿ ವ್ಯಾಪಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ನಗರದಲ್ಲಿ ಬೀದಿಬದಿ ವ್ಯಾಪಾರಿಗಳಿಂದ ಸಾರ್ವಜನಿಕರ ಓಡಾಟ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಬೀದಿ ಬದಿ ವ್ಯಾಪಾರಗಳನ್ನ ತೆರವುಗೊಳಿಸಿ ಎಂದು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರ ವೃತ್ತ ನಿರೀಕ್ಷಕ ಮಿಥುನ್ ಶಿಲ್ಪಿ, ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳಿಂದ ಸಾರ್ವಜನಿಕರು ಮತ್ತು ವಾಹನ ಸವಾರರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ ರಸ್ತೆ ಬದಿಗಳಲ್ಲಿ ಕೆಲವು ವ್ಯಾಪಾರಿಗಳು ಎರಡರಿಂದ ಮೂರು ವಾಹನಗಳನ್ನ ನಿಲುಗಡೆ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ ವಾಹನ ನಿಲುಗಡೆ ಮಾಡಿಕೊಂಡು ವ್ಯಾಪಾರ ಮಾಡುವವರ ವಿರುದ್ದ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲು ಅವಕಾಶವಿಲ್ಲ ಆದರೆ ನಿಮ್ಮ ಸಮಸ್ಯೆಗಳನ್ನು ನಾವು ಹಾಲಿಸಬೇಕಿದೆ ಹಾಗಾಗಿ  ಒಬ್ಬ ವ್ಯಾಪಾರಿ ಒಂದು ತಳ್ಳುವ ಗಾಡಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ವ್ಯಾಪಾರ ನಡೆಸಬೇಕು ಯಾವುದೇ ವಾಹನಗಳನ್ನ ವ್ಯಾಪಾರಕ್ಕೆ ಬಳಸಬಾರದು ಒಂದು ವೇಳೆ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ಅಪಘಾತ ಸಾವು ನೋವು ಸಂಭವಿಸಿದರೆ ಅದಕ್ಕೆ ನೀವೇ ಹೊಣಗಾರರು ನೋಂದ ಕುಟುಂಬಗಳಿಗೆ ನೀಮ್ಮಿಂದಲೇ ಪರಿಹಾರ ಕೋಡಬೇಕಾಗುತ್ತದೆ ಎಂದು ಸೂಚನೆ ನೀಡಿದರು.

 ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಅನುಚಿತವಾಗಿ ವರ್ತಿಸುವುದು ಕಂಡುಬಂದರೆ ಅಂಥವರ ವಿರುದ್ಧ ನಿರ್ದಾಕ್ಷಣವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಅದಕ್ಕೆ ಯಾರೂ ಆಸ್ಪದ ಕೊಡಬಾರದು  ಬೀದಿ ಬದಿ ವ್ಯಾಪಾರದ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಮುಂದಿನ ನಿರ್ಧಾರ ಕೈಗೊಳ್ಳುವವರೆಗೂ  ನಮ್ಮ ಸೂಚನೆಯನ್ನು ಧಿಕ್ಕರಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವ ರೀತಿಯಲ್ಲಿ ವ್ಯಾಪಾರ ನಡೆಸುವುದು ಕಂಡುಬಂದರೆ ಎಲ್ಲಾ ಬೀದಿಬದಿ ವ್ಯಾಪಾರಿಗಳನ್ನ ತೆರವುಗೊಳಿಸಬೇಕಾಗುತ್ತದೆ ಎಚ್ಚರಿಕೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯಾಪಾರ ವಹಿವಾಟು ನಡೆಸುವಂತೆ ಖಡಕ್ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳ ನಗರಸಭೆ ಅಧ್ಯಕ್ಷ. ಆನಂದ್, ಉಪಾಧ್ಯಕ್ಷ. ಶ್ರೀನಿವಾಸ್, ಖಜಾಂಚಿ ರಾಜು, ಮಹಿಳಾ ಘಟಕದ  ಅಧ್ಯಕ್ಷ ನಾಗರತ್ನಮ್ಮ, ಸಹ ಕಾರ್ಯದರ್ಶಿ ತ್ಯಾಗರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular