Tuesday, December 30, 2025
Google search engine

Homeರಾಜ್ಯಸುದ್ದಿಜಾಲಸಾರ್ವಜನಿಕರು ಗ್ಯಾರಂಟಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಉದಯ್‌ ಶಂಕರ್

ಸಾರ್ವಜನಿಕರು ಗ್ಯಾರಂಟಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಉದಯ್‌ ಶಂಕರ್

ವರದಿ, ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ರಾಜ್ಯ ಸರ್ಕಾರವು ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಉದಯಶಂಕರ್ ಹೇಳಿದರು.

ಈ ಕುರಿತು ಪಟ್ಟಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅರಿವು ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆಯುತ್ತಿದ್ದು, ಯುವ ನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲಾ ಯೋಜನೆಗಳ ಮೂಲಕ ರಾಜ್ಯದ ಜನರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲ ಕಲ್ಪಿಸಿಕೊಟ್ಟು ಅವರುಗಳನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಯೋಜನೆಗಳಿಂದ ಹೊರಗೆ ಉಳಿದವರು, ಏನಾದರೂ ಸಮಸ್ಯೆಗಳು ಇದ್ದವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಥವಾ ಗ್ಯಾರಂಟಿ ಯೋಜನೆಯ ಸಮಿತಿಯವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿಯನ್ನು ಪಡೆದು ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೊಂದು ಯೋಜನೆಯ ಬಗ್ಗೆ ಸವಿಸ್ತಾರವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾ.ಪಂ. ಇಒ ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಮಹಾಲಿಂಗಪ್ಪ, ರವಿ, ಕಾಂತರಾಜು, ಉಷಾ, ಸಿ.ಎಸ್.ಮೂರ್ತಿ, ಮಹದೇವ, ವಾಸಿಂಪಾಷ, ರಂಗಸ್ವಾಮಿ, ಮುಂಜನಹಳ್ಳಿ ಮಾದೇವ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಪ್ರಭಾಕರ್, ಸಹಕಾರ ವಿಭಾಗದ ಅಧ್ಯಕ್ಷ ತೇಜೋಮೂರ್ತಿ, ಎಸ್.ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯರಾದ ಸಣ್ಣರಾಮೇಗೌಡ, ಸೋಮಶೇಖರ್, ರಜಿನಿ, ಮುಖಂಡರುಗಳಾದ ಗೋಪಾಲ್, ಬಲರಾಮೇಗೌಡ, ಗೋವಿಂದರಾಜು, ಸಂತೋಷ, ರಮೇಶ್, ತಂದ್ರೆಧರ್ಮ, ಕುಮಾರಸ್ವಾಮಿ, ಪಿಡಿಓ ತಿಲಕರಾಜ್, ಕಾರ್ಯದರ್ಶಿ ರವಿ, ಜಿಲ್ಲಾ ಉದ್ಯೋಗ ವಿನಮಯ ಕಚೇರಿಯ ಜಿಲ್ಲಾ ಸಹಾಯಕ ನಿರ್ದೇಶಕಿ ರಾಣಿ, ಚೆಸ್ಕಾಂ ಎಇಇ ಮಧುಸೂದನ್, ಸಂಚಾರಿ ನಿಯಂತ್ರಕ ಗುರು, ಆಹಾರ ಇಲಾಖೆಯ ನಿರೀಕ್ಷರಾದ ಸುರೇಶ, ಡಿ.ಕೆ.ಕೊಪ್ಪಲು ಕುಮಾರ್, ಎಸಿಡಿಪಿಓ ಅಕ್ಕಮಹಾದೇವಿ ಸೇರಿದಂತೆ ಹಲವರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular