Friday, April 18, 2025
Google search engine

Homeರಾಜ್ಯಸುದ್ದಿಜಾಲನಾಳೆ ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ

ನಾಳೆ ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಡಿ.೫ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ ಜನ ಕಲ್ಯಾಣ ಸಮಾವೇಶಕ್ಕೆ ಕ್ಷೇತ್ರದಿಂದ ೨೦ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯನವರ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಕೆ.ಆರ್.ನಗರ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಮೂರು ಉಪ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಿದ ನಂತರ ನಡೆಯುತ್ತಿರುವ ಅತಿದೊಡ್ಡ ಸಮಾವೇಶ ಇದ್ದಾಗಿರುವುದರಿಂದ ಹೆಚ್ಚಿನ
ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಪಕ್ಷದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದ್ದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಪಕ್ಷದ ಪ್ರಮುಖರೊಡನೆ ಸಂಪರ್ಕ ಸಾಧಿಸಿ ನೀವು ಬರುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರಬೇಕು ಎಂದು ತಿಳಿಸಿದರು.

ಕ್ಷೇತ್ರದ ವ್ಯಾಪ್ತಿಯ ಸಾಲಿಗ್ರಾಮ ಮತ್ತು ಕೆ.ಆರ.ನಗರ ತಾಲೂಕುಗಳಿಂದ ೨೦ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಪ್ರದರ್ಶಿಸಬೇಕೆಂದು ಕರೆ ನೀಡಿದ ಅವರು ಎಲ್ಲರೂ ಸಮಾವೇಶದ ಯಶಸ್ಸಿಗೆ ಪ್ರಾಮಾಣಿಕರಾಗಿ ಕೆಲಸ ಮಾಡಬೇಕೆಂದರು.

ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಮಾತನಾಡಿ ಮೂರು ಉಪಚುನಾವಣೆಗಳಲ್ಲಿ ಪಕ್ಷದ ಜಯಭೇರಿ ಬಾರಿಸಿದ್ದು ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಯ ಎದುರಾಗಲಿರುವುದರಿಂದ ಪಕ್ಷದ ಮುಖಂಡರು. ಮತ್ತು ಕಾರ್ಯಕರ್ತರು ಈಗಿಲಿಂದಲೇ ಪಕ್ಷ ಸಂಘಟನೆ ಆರಂಭಿಸಿ ಎಂದರು.
ಪಕ್ಷ ಸಂಘಟಿಸಿ ಸಮಾವೇಶಕ್ಕೆ ಹೆಚ್ಚು ಜನರನ್ನು ಕರೆ ತರುವ ನಾಯಕರಿಗೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಯ ಸಮಯದಲ್ಲಿ ಹೆಚ್ಚಿನ ಅವಕಾಶ ನೀಡುವುದಾಗಿ ಭರವಸೆ ನೀಡಿದ ಅವರು ಈ ಸವಾಲನ್ನು ಸ್ವೀಕರಿಸಿ ಎಂದರಲ್ಲದೆ ಮಹಿಳಾ ಮುಖಂಡರು ಸಹ ಈ ವಿಚಾರದಲ್ಲಿ ಹಿಂದೆ ಬೀಳಬಾರದು ಎಂದು ಹುರಿದುಂಬಿಸಿದರು.

ಮಹಿಳಾ ಘಟಕದ ಅಧ್ಯಕ್ಷರಾದ ರಾಣಿ, ಲತಾ, ಜಿಲ್ಲಾ ಕಾಂಗ್ರೆಸ್ ಮುಖಂಡ ಜಿ.ಎಸ್.ವೆಂಕಟೇಶ್, ಜಿ.ಪಂ. ಮಾಜಿ ಸದಸ್ಯರಾದ ಜಿ.ಆರ್.ರಾಮೇಗೌಡ, ಜಯರಾಮೇಗೌಡ, ನಾಗರತ್ನಶ್ರೀನಿವಾಸ್, ತಾ.ಪಂ. ಮಾಜಿ ಅಧ್ಯಕ್ಷರಾದ ಹಾಡ್ಯಮಹದೇವಸ್ವಾಮಿ, ಹೆಚ್.ಟಿ.ಮಂಜುನಾಥ್, ಕೆ.ಪಿ.ಯೋಗೇಶ್, ಮಾಜಿ ಸದಸ್ಯ ಜಿ.ಎಸ್.ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆಡಗನಟರಾಜು, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷ ರಂಗಸ್ವಾಮಿ, ದೊಡ್ಡೇಕೊಪ್ಪಲು ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿಬಲರಾಮು, ಸದಸ್ಯ ಕೆ.ಪಿ.ಜಗದೀಶ್,
ಅಡಗೂರು ಗ್ರಾ.ಪಂ. ಅಧ್ಯಕ್ಷ ಮಹದೇವ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಸ್.ಸಿದ್ದೇಗೌಡ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಕಾಂಗ್ರೆಸ್ ಮುಖಂಡರಾದ ಗುಣಪಾಲ್‌ಜೈನ್, ತಿಮ್ಮಶೆಟ್ಟಿ, ರಾಜಯ್ಯ, ಬಲರಾಮೇಗೌಡ, ವಿ.ಸುರೇಶ್, ಸಿದ್ದಯ್ಯ,
ಶಾಂತಿರಾಜಯ್ಯ, ಕಮಲಮ್ಮ, ರಾಮಚಾರಿ, ಮಹದೇವ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

RELATED ARTICLES
- Advertisment -
Google search engine

Most Popular