ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಹೊರವಲಯದ ಅನಂತನಹಳ್ಳಿ ಐಟಿಐ ಬಳಿ ಪ್ರೇಮಿಗಳಿಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರಾದವರು ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ (18) ಮತ್ತು ಬಂಡ್ರಿ ಗ್ರಾಮದ ದೀಪಿಕಾ (18) ಎಂಬುದು ತಿಳಿದುಬಂದಿದೆ. ಇಬ್ಬರೂ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಪಿಯುಸಿ ಫಲಿತಾಂಶ ಪ್ರಕಟವಾದ ಏಪ್ರಿಲ್ 15ರಿಂದ ಇಬ್ಬರೂ ನಾಪತ್ತೆಯಾಗಿದ್ದರು. ದೀಪಿಕಾ 438 ಅಂಕ ಹಾಗೂ ಮದ್ದನಸ್ವಾಮಿ 373 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.
ಹೆಚ್ಚಿನ ಮಾಹಿತಿಗಾಗಿ ಹರಪನಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ.