Friday, April 18, 2025
Google search engine

Homeರಾಜ್ಯಸುದ್ದಿಜಾಲಮರಣದ ನಂತರವೂ ಜೀವಿಸಿರುವ ಪುನೀತ್‌: ನಾರಾಯಣಗೌಡ ಬಣ್ಣನೆ

ಮರಣದ ನಂತರವೂ ಜೀವಿಸಿರುವ ಪುನೀತ್‌: ನಾರಾಯಣಗೌಡ ಬಣ್ಣನೆ

  • ವಿವಿಧ ಕ್ಷೇತ್ರದ ಸಾಧಕರಿಗೆ ಡಾ ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮೈಸೂರು: ಮಲೆ ಮಾದೇಶ್ವರ ಸೇವಾ ಸಂಸ್ಥೆ ವತಿಯಿಂದ ವಿಜಯನಗರದ ಖಾಸಗಿ ಹೋಟೆಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಸಂಗೀತ ಹಾಗೂ ವೈದ್ಯಕೀಯ ಕ್ಷೇತ್ರದಿಂದ ಡಾಕ್ಟರ್ ರೇಖಾ ಮನಃಶಾಂತಿ, ನಿರೂಪಣೆ ಕ್ಷೇತ್ರ ಮಂಜು ಸಿ ಶಂಕರ್, ಸಹಕಾರಿ ಕ್ಷೇತ್ರ ರಿಷಿ ವಿಶ್ವಕರ್ಮ, ಸಂಘಟನಾ ಕ್ಷೇತ್ರ ರೂಪ ಎಚ್ ಗೌಡ, ಕ್ರೀಡಾ ಕ್ಷೇತ್ರ ಅಲೋಕ್ ಆರ್ ಜೈನ್, ಚಿತ್ರರಂಗ ಕ್ಷೇತ್ರ ಸ್ಮಿತಾ ಬಿ, ಸಂಘಟನಾ ಕ್ಷೇತ್ರ ಕಾಡನಹಳ್ಳಿ ಡಿ. ಸ್ವಾಮಿಗೌಡ ರವರಿಗೆ ಡಾ. ಪುನೀತ್ ರಾಜರತ್ನ ಪ್ರಶಸ್ತಿ ಪ್ರಧಾನ ನೀಡಿ ಮಾತನಾಡಿದ ಅವರು ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಕೇವಲ 46 ವರ್ಷ ಬದುಕಿದರೂ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ’ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ಮಾತನಾಡಿ ‘ಪುನೀತ್ ರಾಜಕುಮಾರ್ ಅದ್ಭುತ ನಟ. ಬಾಲ್ಯದಿಂದಲೇ ನಟನೆ ಯಲ್ಲಿ ತೊಡಗಿಕೊಂಡಿದ್ದ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅಂತಹ ಅಭಿಮಾನದ ವಿದಾಯ ಎಲ್ಲರಿಗೂ ಸಿಗುವುದಿಲ್ಲ’ ಎಂದು ಹೇಳಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದರು.
ಸನ್ಮಾನ್ಯ ಪುನೀತ್ ರಾಜ್‍ಕುಮಾರ್ ಅವರು ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ನೀಡುತ್ತಿದ್ದರಲ್ಲದೇ, ಎಲೆಮರೆಯ ಕಾಯಿಯಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಇಂದಿನ ಯುವ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಮಾತನಾಡಿ ನಟರಾಗಿ ಮಾತ್ರವಲ್ಲದೆ ಸಮಾಜಮುಖಿಯಾಗಿ ಒಳ್ಳೆಯ ಮಾನವೀಯ ಕೆಲಸಗಳನ್ನು ಮಾಡುವ ಮೂಲಕ ಕನ್ನಡಿಗರ ಮೆಚ್ಚುಗೆ ಪಡೆದಿದ್ದರು. ಅವರು ಅಭಿಮಾನಿಗಳಿಗೆ ಆರಾಧ್ಯ ದೈವವೂ ಆಗಿದ್ದಾರೆ. ಅವರು ಇಲ್ಲದಿದ್ದರೂ ಅವರು ಮಾಡಿರುವ ಸಮಾಜಮುಖಿ ಕೆಲಸ ಇಂದಿಗೂ ಜೀವಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣ ಗೌಡ, ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ನಜರ್ಬಾದ್ ನಟರಾಜ್, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷರಾದ ಜಿ ರಾಘವೇಂದ್ರ, ಮಲೆ ಮಾದೇಶ್ವರ ಸೇವಾ ಸಂಸ್ಥೆ ಸಂಸ್ಥೆಯ ಅಧ್ಯಕ್ಷರಾದ ಮಹಾನ್ ಶ್ರೇಯಸ್, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular