Monday, April 14, 2025
Google search engine

HomeUncategorizedರಾಷ್ಟ್ರೀಯಪಂಜಾಬ್​: ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, 7 ಮಂದಿಗೆ ಗಾಯ

ಪಂಜಾಬ್​: ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, 7 ಮಂದಿಗೆ ಗಾಯ

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾನುವಾರ ರಾತ್ರಿ ಬಟಾಲದ ವಿತ್ವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ಗುಂಪುಗಳಲ್ಲಿ ಒಟ್ಟು 13 ಜನರಿದ್ದರು. ಕಾರಿನ ಮೇಲೆ 60 ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ.

ಗುಂಡಿನ ದಾಳಿಯಲ್ಲಿ ಪ್ರತಿ ಗುಂಪಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ನೀರಿಗಾಗಿ ನಡೆದ ಸಂಘರ್ಷದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಭೂಮಿಗೆ ಕಾಲುವೆ ನೀರು ಕೊಂಡೊಯ್ಯುವ ವಿವಾದದ ವೇಳೆ ಘರ್ಷಣೆ ನಡೆದಿದೆ.

ಎದುರಾಳಿ ಬಣ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇನ್ನೊಂದು ಬಣ 60 ಸುತ್ತು ಗುಂಡು ಹಾರಿಸಿದ್ದಾರೆ. ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಎರಡೂ ಕಡೆಯವರನ್ನು ಬಂಧಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಗಾಯಾಳುಗಳ ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular