ಬೆಂಗಳೂರು: ಪಂಜಾಬ್ ಸರ್ಕಾರದ ಸಮಾಜ ಕಲ್ಯಾಣ ಸಚಿವೆ ಡಾ.ಬಲ್ಜಿತ್ ಕೌರ್ ಅವರು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನ ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಭೇಟಿಯಾದ ಉಭಯ ಸಚಿವರುಗಳು ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಏಳಿಗೆಗಾಗಿ ಹಮ್ಮಿಕೊಂಡಿರುವ ಯೋಜನೆಗಳು ಹಾಗೂ ಅವುಗಳ ಅನುಷ್ಠಾನಕ್ಕೆ ಕೈಗೊಂಡಿರುವ ಮತ್ತು ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು.
ಇದೇ ವೇಳೆ ಡಾ. ಬಲ್ಜಿತ್ ಕೌರ್ ಅವರು ಕರ್ನಾಟಕ ಸರ್ಕಾರವು ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿದ ಕ್ರಮವನ್ನು ಮೆಚ್ಚಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.
