ಕೆ.ಆರ್.ನಗರ: ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ನೂತನ ಉಪಾಧ್ಯಕ್ಷರಾಗಿ ಪುಷ್ಪರೇವಣ್ಣ ಅವಿರೋಧವಾಗಿ ಆಯ್ಕೆಯಾದರು. ಈವರೆಗೆ ಉಪಾಧ್ಯಕ್ಷರಾಗಿದ್ದ ಸಿದ್ದನಾಯಕ ಅವರ ರಾಜೀನಾಮೆಯಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬ್ಯಾಂಕ್‌ನ ಆಡಳಿತ ಕಛೇರಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಪುಷ್ಪರೇವಣ್ಣ ಅವರನ್ನು ಹೊರತು ಪಡಿಸಿ ಬೇರಾರು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಸೋಮಶೇಖರ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಚುನಾವಣಾ ಸಭೆಯಲ್ಲಿ ಅಧ್ಯಕ್ಷ ಕೆ.ಟಿ.ಚಂದ್ರೇಗೌಡ, ಮಾಜಿ ಅಧ್ಯಕ್ಷ ಎಂ.ಎಸ್.ಹರಿಚಿಂದಬರ್ ನಿರ್ದೇಶಕರಾದ ಹಾಡ್ಯಪ್ರಸಾದ್, ಬಿ.ಸಿದ್ದೇಗೌಡ, ಕಲಾವತಿ, ಬಿ.ಎಸ್.ಚಂದ್ರಹಾಸ, ಮಲ್ಲಿಕಾರ್ಜುನ, ಆರ್.ಸಿ.ರಮೇಶ್, ಪ್ರೇಮಕುಳ್ಳಬೋರೇಗೌಡ, ಚಂದ್ರಶೇಖರ್, ಪರಶುರಾಮು, ರಾಮೇಗೌಡ, ನಾಮನಿರ್ದೇಶಕ ಪ್ರದೀಪ್ , ವ್ಯವಸ್ಥಾಪಕಿ ಗಾಯತ್ರಮ್ಮ, ಕ್ಷೇತ್ರಧಿಕಾರಿ ಕುಮಾರ್ ಹಾಜರಿದ್ದರು.
ನೂತನ ಉಪಾಧ್ಯಕ್ಷರನ್ನು ಅಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ಕಾರ್ಯದರ್ಶಿ ರಾಜೇಗೌಡ, ವಕ್ತಾರ ಸೈಯದ್‌ಜಾಬೀರ್, ಟಿಎಪಿಸಿಎಂಎಸ್ ನಿರ್ದೇಶಕ ಡಿ.ಸಿ.ರವಿ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಸಂಗೊಳ್ಳಿ ರಾಯಣ್ಣ ಸಹಕಾರ ಸಂಘದ ಅಧ್ಯಕ್ಷ ಹರೀಶ್, ಮುಖಂಡರಾದ ಡಿ.ಆರ್.ರಾಹುಲ್, ಡಿ.ಕೆ.ಪುಟ್ಟೇಗೌಡ, ಸಂಪತ್‌ಕುಮಾರ್, ಮಹದೇವ್ ಮತ್ತಿತರರು ಅಭಿನಂದಿಸಿದರು.
ಉಪಾಧ್ಯಕ್ಷೆಯಾಗಿ ಆಯ್ಕೆಯಾದ ನಂತರ ಪುಷ್ಪರೇವಣ್ಣ ಅವರು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡರವರನ್ನು ಭೇಟಿ ಮಾಡಿ ತಮ್ಮನ್ನು ಉಪಾಧ್ಯಕ್ಷೆಯನ್ನಾಗಿ ಆಯ್ಕೆಗೆ ಸಹಕರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಉಪಾಧ್ಯಕ್ಷರ ಬೆಂಬಲಿಗರು ಹಾಗೂ ಅಭಿಮಾನಿಗಳು ಹಾಜರಿದ್ದರು.