ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಮಹಿಳಾ ಪೊಲೀಸ್ ಠಾಣೆಗೆ ಗೃಹಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇಂದು ಮಂಗಳೂರಲ್ಲಿ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಲಾದ ಸಂದರ್ಭದಲ್ಲಿ, ವೇದಿಕೆಯಲ್ಲೇ ಅಸ್ತು ಎಂದ ರಾಜ್ಯದ ಗೃಹ ಸಚಿವರಾದ ಶ್ರೀ ಪರಮೇಶ್ವರ್ ಅವರು ಒಂದು ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿದ್ದಾರೆ. ಇದು ಪುತ್ತೂರು ಮಂದಿಗೆ ಖುಷಿ ನೀಡಿದೆ.