ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಹೊರವಲಯದ ಬೋಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿರುವ ಬಿಜೆಪಿ ಕಾರ್ಯಕರ್ತರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ರು. ಇದೇ ವೇಳೆ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಇತರರು ಹಾಜರಿದ್ದರು.