Friday, April 4, 2025
Google search engine

Homeಕ್ರೀಡೆಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

ನವದೆಹಲಿ: ಟೀಮ್ ಇಂಡಿಯಾದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನಕ್ಕೆ ಬುಧವಾರ (ಡಿ.18 ರಂದು) ನಿವೃತ್ತಿ ಘೋಷಿಸಿದ್ದಾರೆ.

ಗಾಬಾದಲ್ಲಿ ನಡೆದ ಭಾರತ – ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ ಪಂದ್ಯ ಡ್ರಾ ಆಗಿದೆ. ಈ ಸುದ್ದಿಯ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್ ಅವರು ನಿವೃತ್ತಿ ಘೋಷಿಸಿದ್ದಾರೆ. ವಿರಾಟ್‌ ಕೊಹ್ಲಿ ಜತೆ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕೂತಿದ್ದ ಅಶ್ವಿನ್ ಅವರು ಒಂದು ಅಪ್ಪುಗೆ ಕೊಟ್ಟಿದ್ದರು. ಈ ವೇಳೆಯೇ ಅವರು ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

38 ವರ್ಷದ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್‌ ಪಡೆದ ಎರಡನೇ ಭಾರತೀಯ ಆಟಗಾರನಾಗಿದ್ದಾರೆ.

ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅವರು ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. 2010 ಜೂ.5 ರಂದು ಶ್ರೀಲಂಕಾ ವಿರುದ್ದ ಏಕದಿನ ಪಂದ್ಯಕ್ಕೆ ಎಂಟ್ರಿ ಆಗಿದ್ದರು.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅಶ್ವಿನ್‌ ಒಟ್ಟು 537 ವಿಕೆಟ್‌ ಗಳನ್ನು ಪಡೆದಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 6 ಶತಕವನ್ನು ಅಶ್ವಿನ್‌ ಸಿಡಿಸಿದ್ದು, 14 ಅರ್ಧಶತಕಗಳನ್ನು ಒಳಗೊಂಡಂತೆ ಟೆಸ್ಟ್ ಕ್ರಿಕೆಟ್‌ನಲ್ಲಿ 3503 ರನ್ ಗಳಿಸಿದ್ದಾರೆ.

ಭಾರತದ ಪರ 116 ಏಕದಿನ ಮತ್ತು 65 T20I ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಯಲ್ಲಿ ಅಶ್ವಿನ್ ಒಟ್ಟು 775 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರು 37 ಬಾರಿ ಐದು ವಿಕೆಟ್ ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ.

116 ಏಕದಿನ ಪಂದ್ಯಗಳಲ್ಲಿ 156 ವಿಕೆಟ್‌ ಪಡೆದಿದ್ದಾರೆ. 65 ಟಿ-20 ಪಂದ್ಯದಲ್ಲಿ 72 ವಿಕೆಟ್‌ ಪಡೆದು ಹಲವು ಪಂದ್ಯಗಳ ಗೆಲುವಿಗೆ ರೂವಾರಿ ಆಗಿದ್ದಾರೆ.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರ ಕ್ರಿಕೆಟ್‌ ವೃತ್ತಿ ಜೀವನವನ್ನು ಮುಂದುವರೆಸಲಿದ್ದಾರೆ.

RELATED ARTICLES
- Advertisment -
Google search engine

Most Popular