Saturday, April 19, 2025
Google search engine

Homeರಾಜ್ಯಸುದ್ದಿಜಾಲರಾಘವ ಮೆಮೋರಿಯಲ್ ಅಸೋಸಿಯೇಷನ್: ಶಾಲಾ ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಬೆಳೆಸಲು ಶಾಲೆಗಳ ದತ್ತು

ರಾಘವ ಮೆಮೋರಿಯಲ್ ಅಸೋಸಿಯೇಷನ್: ಶಾಲಾ ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಬೆಳೆಸಲು ಶಾಲೆಗಳ ದತ್ತು

ಬಳ್ಳಾರಿ : ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಹೆಚ್ಚಿಸಲು ಸರ್ಕಾರಿ ಮತ್ತು ಖಾಸಗಿಶಾಲೆಗಳನ್ನ ದತ್ತು ಪಡೆದು ಮಕ್ಕಳಿಗೆ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ತರಬೇತಿ ಮತ್ತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಿದೆಂದು ರಾಘವ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ ಹೇಳಿದ್ದಾರೆ.
ಅವರಿಂದು ರಾಘವ ಕಲಾಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳಲ್ಲಿ ಸಾಂಸ್ಕೃತಿಕ ಶಿಕ್ಷಣ ನೀಡುವುದರ ಜೊತೆಗೆ ಬಳ್ಳಾರಿ ರಾಘವರ ಬಗ್ಗೆ ಪರಿಚಯಿಸುವ ಕೆಲಸ ಮಾಡಲಿದೆಂದರು.
ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್ ಮತ್ತು ಕಾರ್ಯದರ್ಶಿ ಪ್ರಕಾಶ್ ಮಾತನಾಡಿ, ಕಲಾಮಂದಿರ ಅಭಿವೃದ್ದಿಪಡಿಸಲು, ನಗರ ಶಾಸಕರು 25 ಲಕ್ಷ ರೂ ನೆರವು ನೀಡುವುದಾಗಿ ಭರವಸೆನೀಡಿದ್ದಾರೆ. ದೊರೆತರೆ ರಾಘವ ಕಲಾ ಮಂದಿರದ ವೇದಿಕೆಯನ್ನು ಸುಸಜ್ಜಿತವಾಗಿ ನಿರ್ಮಿಸುವ ಕುರಿತು ಚಿಂತನೆ ನಡೆಸಲಿದೆಂದು ತಿಳಿಸಿದರು.
ಅಸೋಸಿಯೇಷನ್ ತನ್ನ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ, ಕಳೆದ ಒಂದು ವರ್ಷದಿಂದ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತ, ನೃತ್ಯ, ಸಂಗೀತ, ನಾಟಕ ಪ್ರದರ್ಶನಗಳು ಹಮ್ಮಿಕೊಳ್ಳಲಾಗುತ್ತಿದೆ ತಿಳಿಸಿದರು.
ಈ ಸಂದರ್ಭದಲ್ಲಿ, ಅಸೋಸಿಯೇಷನ್ ನ, ಎನ್.ಬಸವರಾಜ್, ಎಂ. ರಾಮಾಂಜಿನೇಯಲು, ರಮೇಶಗೌಡ ಪಾಟೀಲ್, ರಮಣಪ್ಪ ಭಜಂತ್ರಿ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular