Tuesday, April 15, 2025
Google search engine

Homeರಾಜ್ಯಮೈಸೂರು ಮೆಡಿಕಲ್‌ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯಾಗಿ ರಘು ನೇಮಕ

ಮೈಸೂರು ಮೆಡಿಕಲ್‌ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯಾಗಿ ರಘು ನೇಮಕ

ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಎ ಈ ರಘು ಅವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್ ಆದೇಶ ಹೊರಡಿಸಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕಳೆದ 7 ತಿಂಗಳಿನಿಂದ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ರಘು ಎ ಈ ಕೆಎಎಸ್ ಹಿರಿಯ ಶ್ರೇಣಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 68ರ ಅಡಿ ಅವರು ಹೊಂದಿರುವ ಹುದ್ದೆಯ ಕರ್ತವ್ಯದ ಜೊತೆಗೆ ಮುಖ್ಯ ಆಡಳಿತಾಧಿಕಾರಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮೈಸೂರು ಕಲ್ಪಶ್ರೀ ಸಿ ರವರ ಸ್ಥಾನಕ್ಕೆ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular