Wednesday, April 9, 2025
Google search engine

HomeUncategorizedರಾಷ್ಟ್ರೀಯನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 93ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ.

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭೂಕುಸಿತ ಸಂಭವಿಸಿದ ವಯನಾಡಿಗೆ ನಾಳೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರೀ ಭೂಕುಸಿತದಿಂದ ತೀವ್ರ ಹಾನಿಗೊಳಗಾಗಿರುವ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವಿರೋಧ ಪಕ್ಷದ ನಾಯಕ ಮತ್ತು ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular