Saturday, April 19, 2025
Google search engine

Homeರಾಜ್ಯಇಂದು ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರು

ಇಂದು ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಶುಕ್ರವಾರ ಹಾಜರಾಗಲಿದ್ದಾರೆ.

ಇದೇ ಮೊಕದ್ದಮೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಲಯ ಈಗಾಗಲೇ ಷರತ್ತುಬದ್ಧ ಜಾಮೀನು ನೀಡಿದೆ. ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್. ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ಶಾಸಕರು,ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ 42ನೇ ಇಸಿಎಂಎಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಆರೋಪಿ. ಎರಡನೇ ಆರೋಪಿ ಡಿ.ಕೆ. ಶಿವಕುಮಾರ್. ಮೂರನೇ ಆರೋಪಿ ಸಿದ್ದರಾಮಯ್ಯ, ನಾಲ್ಕನೇ ಆರೋಪಿ ರಾಹುಲ್ ಗಾಂಧಿ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಗಾಂಧಿ ಜೂನ್ 7 ಖುದ್ದು ಹಾಜರಾಗುವಂತೆ ನಿರ್ದೇಶಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಲ್ಪಟ್ಟರು.

ಇಂದು ಶುಕ್ರವಾರ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆ ಮುಗಿದ ಬಳಿಕ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ವಿಜೇತರಾದವರು ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಕ್ವೀನ್ಸ್ ರಸ್ತೆಯಲ್ಲಿನ `ಭಾರತ್ ಜೋಡೊ’ ಭವನದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಸಂಜೆ ೫ ಗಂಟೆಗೆ ರಾಹುಲ್ ದೆಹಲಿಗೆ ಮರಳಲಿದ್ದಾರೆ’ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

RELATED ARTICLES
- Advertisment -
Google search engine

Most Popular