Monday, December 2, 2024
Google search engine

Homeಆರೋಗ್ಯರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ರಾಯಚೂರು: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಿಗ್ಗೆ ಪುಲಾವ್ ತಿಂದಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ತಿಂಡಿ ತಿಂದಾದ ನಂತರ ಅವರಲ್ಲಿ ವಾಂತಿ, ಬೇಧಿ, ತಲೆ ನೋವು, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕೆಲವು ಮಕ್ಕಳಲ್ಲಿ ತಲೆ ತಿರುಗುವಿಕೆ ಕಾಣಿಸಿತ್ತು.

ವಸತಿ ಶಾಲೆಯಲ್ಲಿ ಪುಲಾವ್ ತಯಾರಿಸುವ ವೇಳೆ ಅದಕ್ಕೆ ಹಲ್ಲಿ ಬಿದ್ದಿತ್ತು ಎನ್ನಲಾಗುತ್ತಿದೆ.

RELATED ARTICLES
- Advertisment -
Google search engine

Most Popular