ರಾಯಚೂರು: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಮೂಲದ ಅನುಪಮಾ (20) ಮೃತ ಗರ್ಭಿಣಿ. ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್ ಇನ್ಸ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಇಬ್ಬರು ಪ್ರೀತಿಸಿ 11 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು, ಆದರೆ ಇತ್ತೀಚೆಗೆ ನಾಗರಾಜ್ ಮನೆಯವರು ಜಾತಿ ಬೇರೆ, ವರದಕ್ಷಿಣೆ ತಂದಿಲ್ಲವೆಂದು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದೀಗ ಗಂಡನ ಮನೆಯವರ ಕಿರುಕುಳ, ಹಿಂಸೆಯಿಂದಲೇ ತಮ್ಮ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಅನುಪಮಾ ತಂದೆ ಆರೋಪಿಸಿದ್ದು, ಅನುಪಮಾ ಪತಿ ನಾಗರಾಜ್ ಸೇರಿ 6 ಜನರ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿ ಪತಿ ನಾಗರಾಜ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.