ರಾಯಚೂರು: ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ನಗರದ ಎಲ್ ಬಿಎಸ್ ನಗರದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ಮಿಶ್ರಿತ ಗಾಂಜಾ ಮಿಶ್ರಿತ ಚಾಕೊಲೇಟ್ ಗಳನ್ನು ಜಪ್ತಿ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ರಾಚಯ್ಯಸ್ವಾಮಿ, ಅಮರಯ್ಯಸ್ವಾಮಿ ಬಂಧಿತರು.
ಬಂಧಿತರಿಂದ 2.66 ಕೆ.ಜಿ ತೂಕದ 482 ಗಾಂಜಾ ಮಿಶ್ರಿತ ಚಾಕೊಲೇಟ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಉತ್ತರಪ್ರದೇಶ ಮೂಲದವರಿಂದ ಚಾಕಲೇಟ್ ಗಳನ್ನು ಖರೀದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ನಗರದ ವಿವಿಧ ಬಡಾವಣೆಗಳಲ್ಲಿ 50 ರಿಂದ 100 ರೂ.ವರೆಗೆ ಒಂದು ಚಾಕೋಲೆಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ಹನುಮಂತ ಗುತ್ತೇದಾರ ನೇತೃತ್ವದಲ್ಲಿ ದಾಳಿ ನಡೆಸಿ, ಆರೋಪಿಗಳನ್ನು ಗಾಂಜಾ ಮಿಶ್ರಿತ ಚಾಕೋಲೇಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.