Friday, April 11, 2025
Google search engine

Homeರಾಜ್ಯರಾಜ್ಯದಲ್ಲಿ ಡಿ.20 ರಿಂದ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಡಿ.20 ರಿಂದ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರುಣಾರ್ಭಟ ಆರಂಭವಾಗಲಿದ್ದು, ಮುಂದಿನ ೪೮ ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ೨೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ. ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ ೨೦ ರಿಂದ ಮಳೆಯಾಗುವ ಸಾಧ್ಯತೆ ಇದೆ. .ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಚಾಮರಾಜನಗರ, ಹಾಸನ, ಕೊಡಗು. ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ ೨೦ ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular