ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಗುರುವಾರ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ೨೯ರಿಂದ ೩೧ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಆಗಸ್ಟ್ ೨೯ರಿಂದ ೩೦ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಆಗಸ್ಟ್ ೨೯ರಿಂದ ಸೆಪ್ಟೆಂಬರ್ ೧ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.