ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಕೆರೆ ಕೋಡಿ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಇದರಿಂದಾಗಿ ನೂರಾರು ಎಕರೆ ಜಮೀನು ಜಲಾವೃತವಾಗಿವೆ.
ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಅಘಾಲಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ತೆಂಗು, ಅಡಿಕೆ, ಬಾಳೆ, ಜೋಳ ಬೆಳೆ ನಾಶವಾಗಿರೋದು ಕಂಡು ಬಂದಿದೆ. ಈ ಹಿಂದೆ ಕೂಡ ಕೆರೆ ಕೋಡಿ ಒಡೆದು ಅವಾಂತರ ಸೃಷ್ಟಿಯಾಗಿತ್ತು, ತಾತ್ಕಾಲಿಕವಾಗಿ ಅಧಿಕಾರಿಗಳು ಕೆರೆ ದುರಸ್ತಿ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ಮತ್ತೆ ಕೆರೆ ಕೋಡಿ ಒಡೆದು ಮತ್ತಷ್ಟು ಅವಾಂತರಗಳನ್ನು ಸೃಷ್ಟಿಸಿದ್ದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಇಡಿ ಶಾಪ ಹಾಕುತ್ತಿದ್ದಾರೆ.