ಬೆಂಗಳೂರು : ಮಾಯವಾದ ಮುಂಗಾರು ಮತ್ತೆ ಚುರುಕುಗೊಳ್ಳೋ ಸಾಧ್ಯತೆ ಇದ್ದು, ರಾಜ್ಯದಲ್ಲಿ ಕೈ ಕೊಟ್ಟಿರುವ ಮಳೆ, ಜನ ಜೀವನಕ್ಕೆ ಬರೆ ಎಳೆದಂತಾಗಿದೆ. ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ. ಮುಂದಿನ ೪ – ೫ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ೧೫ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಬಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಿಗೆ ಯಾಥ ಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.