Friday, April 4, 2025
Google search engine

Homeರಾಜ್ಯಇಂದಿನಿಂದ ಡಿಸೆಂಬರ್‌ 28ರವರೆಗೂ ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಇಂದಿನಿಂದ ಡಿಸೆಂಬರ್‌ 28ರವರೆಗೂ ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್‌ 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಇದಲ್ಲದೇ ಮುಂದಿನ 5 ದಿನಗಳ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.

RELATED ARTICLES
- Advertisment -
Google search engine

Most Popular