Sunday, June 8, 2025
Google search engine

Homeರಾಜ್ಯರಾಜ್ಯಾದ್ಯಂತ ಮುಂದಿನ ಒಂದು ವಾರ ಮಳೆ ಸಾಧ್ಯತೆ

ರಾಜ್ಯಾದ್ಯಂತ ಮುಂದಿನ ಒಂದು ವಾರ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು ನೀರಿಲ್ಲದೆ ಜನರು ಪರದಾಡುವಂತಾಗಿದೆ. ಜಲಾಶಯಗಳಲ್ಲೂ ನೀರಿನ ಮಟ್ಟ ಕಡಿಮೆಯಾಗಿದ್ದು, ಬೆಳೆಹಾನಿ ಆಗಿದೆ. ಜುಲೈ ಆರಂಭದ ಮೊದಲೆರಡು ವಾರ ಉತ್ತಮ ಮಳೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್ ಅಂತ್ಯದವರೆಗೂ ಮಳೆಯಾಗದೆ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಇಂದು (ಸೆ.೦೧) ಅಧಿಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ ೨೨ ರಷ್ಟು ಕಡಿಮೆ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದರು. ಕಾರಾವಳಿ ೩೨ ಸೆಂ.ಮೀ, ಉತ್ತರ ಒಳನಾಡಿಗೆ -೧೪ ಸೆಂ.ಮೀ, ದಕ್ಷಿಣ ಒಳನಾಡಿನಲ್ಲಿ ೧೪.೯ ಸೆಂ.ಮೀ, ಬೆಂಗಳೂರು ನಗರ ೨೦.೮ ಸೆಂ.ಮೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular