ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ನಗರದಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣಲದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.