Tuesday, May 19, 2026
Google search engine

Homeರಾಜ್ಯಮೇ 21ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಮೇ 21ರವರೆಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 21ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಪ್ಪಳ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹೆಚ್ಚಾಗಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular