Saturday, April 12, 2025
Google search engine

Homeರಾಜ್ಯಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜು.19ರವರೆಗೆ ಮಳೆ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜು.19ರವರೆಗೆ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಸಿದ್ದಾಪುರ, ಸುಳ್ಯ, ಮಾಣಿ,ಮಂಕಿ, ಮಂಗಳೂರು, ಪುತ್ತೂರು, ಶಿವನಿ, ಶಿರಾಲಿ, ಕ್ಯಾಸಲ್​ ರಾಕ್, ಸರಗೂರು, ತುಮಕೂರು, ದಾವಣಗೆರೆ, ಕುಮಟಾ, ಮುಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ, ಬೆಳ್ತಂಗಡಿ, ಲಿಂಗನಮಕ್ಕಿ, ಭದ್ರಾವತಿ, ಬೆಂಗಳೂರು ನಗರ, ಬೆಳ್ಳೂರು, ಮದ್ದೂರು, ಚನ್ನಪಟ್ಟಣ, ಕೊಟ್ಟಿಗೆಹಾರ, ಎನ್ ​ಆರ್​ ಪುರ, ದಾವಣಗೆರೆ, ತಿಪಟೂರಿನಲ್ಲಿ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular