ಮಂಗಳೂರು (ದಕ್ಷಿಣ ಕನ್ನಡ): ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ,ಅದರಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೃತಕ ನೆರೆ ಸೃಷ್ಟಿಯಾಗಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು ತಾಲೂಕು, ಕಡಬ, ಸುಬ್ರಹ್ಮಣ್ಯ, ಬೆಳ್ತಂಗಡಿ, ಮೂಡಬಿದ್ರೆ ಸುಳ್ಯ ತಾಲೂಕಿನಲ್ಲಿ ಭಾರಿ ಮಳೆ ಉಂಟಾಗಿದೆ. ಬಂಗಾಳಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ.
ಇಂದಿನಿಂದ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬಂದ್ಯೋಡು ಕುಂಬ್ಳೆ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿ ಆಗಿರೋದು ಕಂಡು ಬಂತು. ಅಲ್ಲದೆ ಮಂಗಳೂರು ನಗರದ ಹಲವೆಡೆ, ಕೃತಕ ನೆರೆ ಉಂಟಾಗಿದೆ