ಜೈಪುರ: ರಾಜಸ್ಥಾನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ 4:00ಗೆ ನಿಗದಿಯಾಗಿದ್ದು, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ. ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೇ ನೇತೃತ್ವದಲ್ಲಿ ಬಿಜೆಪಿ ಪಕ್ಷದ ರಾಜ್ಯ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ಶಾಸಕ ಭಜನ್ ಲಾಲ್ ಶರ್ಮ ಹೇಳಿದ್ದಾರೆ. ಅಲ್ಲದೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ಶಾಸಕರು ಸಭೆಯಲ್ಲಿ ಹಾಜರಾಗುವಂತೆ ಸೂಚಿಸಲಾಗಿದೆ.